ಜೆದ್ದಾ: ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಭಾರತೀಯರೂ ಸೇರಿದಂತೆ ಸುಮಾರು 20ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದ ಅಸಿರ್ ಗವರ್ನರೇಟ್‌ನ ಅಕಾಬಾ ಶಾರ್‌ನಲ್ಲಿ ನಡೆದಿದೆ.
ಸುಮಾರು 29 ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಪವಿತ್ರ ಉಮ್ರಾ ಯಾತ್ರೆ ನಿರ್ವಹಿಸಲು ತೆರಳುತ್ತಿದ್ದಾಗ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ದುರ್ಘಟನೆ ಸಂಭವಿಸಿದೆ.
ಬಸ್ಸಿನಲ್ಲಿ ಭಾರತೀಯರಲ್ಲದೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದವರೂ ಇದ್ದರು.
ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.