ಅಮೆರಿಕದಲ್ಲಿ ಗುಂಡಿನ ದಾಳಿ: 22 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

Prasthutha|

ವಾಷಿಂಗ್ಟನ್: ಅಮೆರಿಕದ ಮೈನೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

- Advertisement -


ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.


ಮೈನೆಯ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರವಾದ ಲೆವಿಸ್ಟನ್ ನಲ್ಲಿರುವ ಬೌಲಿಂಗ್ ಅಲ್ಲೆ, ರೆಸ್ಟೋರೆಂಟ್ ಮತ್ತು ವಾಲ್ ಮಾರ್ಟ್ ವಿತರಣಾ ಕೇಂದ್ರದಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದಿದೆ. ವರದಿಯಾದ ಗುಂಡಿನ ದಾಳಿಯ ಸ್ಥಳಗಳಲ್ಲಿ ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.