ಕಾಬೂಲ್: ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪನ ಸಂಭವಿಸಿದ್ದು, ದೇಶದ ಪೂರ್ವದಲ್ಲಿ ಕನಿಷ್ಠ 280 ಜನರು ಸಾವನ್ನಪ್ಪಿದ್ದಾರೆ ಎಂದು ರಾಯ್ಟರ್ಸ್ ವರದಿ ಮಾಡಿದೆ.
ಪಕ್ತಿಕಾ ಪ್ರಾಂತ್ಯದಲ್ಲಿಯೇ ಹೆಚ್ಚು ಸಾವುಗಳು ವರದಿಯಾಗಿದ್ದು, ಸುಮಾರು 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಹೇಳಿದ್ದಾರೆ.
ಹೆಚ್ಚಿನ ಸಾವು ನೋವುಗಳನ್ನು ಪರಿಶೀಲಿಸುತ್ತಿರುವುದರಿಂದ ಪೂರ್ವ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್ ನಲ್ಲಿಯೂ ಸಾವುಗಳು ವರದಿಯಾಗಿವೆ ಎಂದು ಅವರು ಹೇಳಿದ್ದಾರೆ.