Home ಟಾಪ್ ಸುದ್ದಿಗಳು ಉಕ್ರೇನ್’ನ ಪೋಲ್ಟವಾದಲ್ಲಿ ರಷ್ಯಾದಿಂದ ಕ್ಷಿಪಣಿ ದಾಳಿ: 41 ಮಂದಿ ಸಾವು

ಉಕ್ರೇನ್’ನ ಪೋಲ್ಟವಾದಲ್ಲಿ ರಷ್ಯಾದಿಂದ ಕ್ಷಿಪಣಿ ದಾಳಿ: 41 ಮಂದಿ ಸಾವು

ಕೈವ್: ಉಕ್ರೇನ್ ನ ಪೋಲ್ಟವಾ ನಗರದಲ್ಲಿ ಮಂಗಳವಾರ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.


ರಷ್ಯಾದ ಪಡೆಗಳು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿದ್ದು, ಅದು ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ಸ್ ಕಟ್ಟಡವನ್ನು ಹಾನಿಗೊಳಿಸಿದವು ಎಂದು ಝೆಲೆನ್ಸ್ಕಿ ವಿಡಿಯೊದಲ್ಲಿ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ವೆಬ್‌ಸೈಟ್ ಎಕ್ಸ್‌ನಲ್ಲಿ ಈ ಬಗ್ಗೆ ಬರೆದ ಝೆಲೆನ್ಸ್ಕಿ, “ಪೋಲ್ಟವಾದಲ್ಲಿ ರಷ್ಯಾದ ದಾಳಿ ಬಗ್ಗೆ ನನಗೆ ಪ್ರಾಥಮಿಕ ವರದಿಗಳು ಬಂದವು. ಲಭ್ಯವಿರುವ ಮಾಹಿತಿಯ ಪ್ರಕಾರ, ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಈ ಪ್ರದೇಶ ಮೇಲೆ ದಾಳಿ ನಡೆದಿದೆ. ಅವರು ಶಿಕ್ಷಣ ಸಂಸ್ಥೆ ಮತ್ತು ಹತ್ತಿರದ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡರು, ದೂರಸಂಪರ್ಕ ಸಂಸ್ಥೆಯ ಕಟ್ಟಡಗಳಲ್ಲಿ ಒಂದನ್ನು ಭಾಗಶಃ ನಾಶಪಡಿಸಿದರು.

ಅನೇಕರು ಅವಶೇಷಗಳಲ್ಲಿ ಸಿಲುಕಿರುವ ಶಂಕೆ ಇದೆ. ದಾಳಿಯಲ್ಲಿ 41 ಜನರು ಸಾವಿಗೀಡಾಗಿದ್ದು, 180 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು.

Join Whatsapp
Exit mobile version