ಹಿಮಾಚಲ, ಉತ್ತರಾಖಂಡದಲ್ಲಿ ಮಳೆ ಅಬ್ಬರ: 54 ಮಂದಿ ಸಾವು

Prasthutha|

ನವದೆಹಲಿ: ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -


ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ.


ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ ಕುಸಿತದಲ್ಲಿ ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Join Whatsapp