Home Uncategorized ಶ್ರೀಲಂಕಾದಲ್ಲಿ ಮತ್ತೆ ಕರ್ಫ್ಯೂ: ಸಂಘರ್ಷದಲ್ಲಿ 78 ಮಂದಿಗೆ ಗಾಯ

ಶ್ರೀಲಂಕಾದಲ್ಲಿ ಮತ್ತೆ ಕರ್ಫ್ಯೂ: ಸಂಘರ್ಷದಲ್ಲಿ 78 ಮಂದಿಗೆ ಗಾಯ

ಕೊಲಂಬೋ: ತಕ್ಷಣದಿಂದ ಜಾರಿಗೆ ಬರುವಂತೆ ಇಡೀ ಶ್ರೀಲಂಕಾದಲ್ಲಿ ಕರ್ಫ್ಯೂ ಹೇರಲಾಗಿದೆ ಎಂದು ಪೊಲೀಸ್ ವಕ್ತಾರರು ಸೋಮವಾರ ಮಧ್ಯಾಹ್ನ ತಿಳಿಸಿದ್ದಾರೆ. ಶ್ರೀಲಂಕಾದಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಸಂಘರ್ಷದಲ್ಲಿ 78 ಮಂದಿ ಗಾಯಗೊಂಡ್ಡಿದ್ದಾರೆ.

ಆರ್ಥಿಕವಾಗಿ ದಿವಾಳಿ ಹೊಂದಿರುವ ದ್ವೀಪರಾಷ್ಟ್ರದಲ್ಲಿ ಐದು ವಾರಗಳಲ್ಲಿ ಎರಡನೇ ಬಾರಿಗೆ ಶುಕ್ರವಾರ (ಮೇ 06) ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಅಧ್ಯಕ್ಷ ಗೊಟಬೊಯ ರಾಜಪಕ್ಸೆ ತುರ್ತು ಪರಿಸ್ಥಿತಿ ಘೋಷಿಸಿದ್ದರು. ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಿ, ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.

ಪ್ರಸ್ತುತ ರಾಜಪಕ್ಸೆ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು, ನಾರಿಕರು ಪಾರ್ಲಿಮೆಂಟ್ ಮುಂಭಾಗದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಅಂಗಡಿ, ಮುಂಗಟ್ಟು, ಸಾರಿಗೆಯನ್ನು ಬಂದ್ ಮಾಡಿದ್ದು, ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ.

Join Whatsapp
Exit mobile version