ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ.
ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕರೂ ಆಗಿರುವ ಕೆ.ಪಿ.ನಂಜುಂಡಿ ಈ ಮೊದಲು ಕಾಂಗ್ರೆಸ್ ಪಕ್ಷದಲ್ಲಿ ಇದ್ದರು.
ಬಿಜೆಪಿಗೆ ಹೋದ ಬಳಿಕ ಯಡಿಯೂರಪ್ಪ ಕೆ.ಪಿ.ನಂಜುಂಡಿ ಅವರನ್ನು ವಿಧಾನಪರಿಷತ್ನ ಸದಸ್ಯರನ್ನಾಗಿ ಮಾಡಿದ್ದರು. ಮುಂದಿನ ಜೂನ್ ವೇಳೆಗೆ ಅವರ ಅಧಿಕಾರವಾಧಿ ಪೂರ್ಣಗೊಳ್ಳಲಿದೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷರ ಜೊತೆ ವಿಶ್ವಕರ್ಮ ಸಮುದಾಯದ ರಾಜ್ಯಾಧ್ಯಕ್ಷರೂ ಆಗಿರುವ ಕೆ.ಪಿ.ನಂಜುಂಡಿ ಅವರು ಉಪಹಾರ ಕೂಟ ನಡೆಸಿರುವುದು ಕುತೂಹಲ ಕೆರಳಿಸಿದೆ.