ಮಾಜಿ ಸಂಸದ ಅತೀಕ್​ ಅಹ್ಮದ್, ಸಹೋದರನ ಕೊಲೆ: ಮೂವರ ಬಂಧನ

Prasthutha|

- Advertisement -

ಯುಪಿಯಲ್ಲಿ ನಿಷೇಧಾಜ್ಞೆ ಜಾರಿ

ಪ್ರಯಾಗರಾಜ್: ಮಾಜಿ ಸಂಸದ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿಗಳನ್ನು ಲವಲೇಶ್ ತಿವಾತಿ, ಸನ್ನಿ ಹಾಗೂ ಅರುಣ್ ಮೌರ್ಯ ಎಂದು ಗುರುತಿಸಲಾಗಿದೆ.

ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಶನಿವಾರ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಗುಂಡು ಹಾರಿಸಲಾಯಿತು.

ಮೂವರು ದಾಳಿಕೋರರನ್ನು ಬಂಧಿಸಲಾಗಿದೆ. ಅಲ್ಲದೆ, ಅಹಿತಕರ ಘಟನೆಗಳನ್ನು ತಡೆಯಲು ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಗಳಲ್ಲಿ ಪೊಲೀಸರು ಗಸ್ತು ಹೆಚ್ಚಿಸಿದ್ದಾರೆ.




Join Whatsapp