►’ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಮುಸ್ಲಿಮರಿಗೆ ರಕ್ಷಣೆ ಇಲ್ಲವೇ?’
ಬೆಂಗಳೂರು: ಹಾವೇರಿಯಲ್ಲಿ ಮುಸ್ಲಿಮರ ಮೇಲೆ ಸಂಘಪರಿವಾರದ ಕಾರ್ಯಕರ್ತರು ನಡೆಸಿದ ದೌರ್ಜನ್ಯವನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ತೀವ್ರವಾಗಿ ಖಂಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ SDPI, ಮುಖ್ಯಮಂತ್ರಿ ಬೊಮ್ಮಾಯಿಯವರ ತವರು ಜಿಲ್ಲೆ ಹಾವೇರಿಯ ರಟ್ಟಹಳ್ಳಿ ಎಂಬಲ್ಲಿ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮರ ಮನೆ, ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಅತ್ಯಂತ ಖಂಡನಿಯ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ, ಮುಸ್ಲಿಮರಿಗೆ ರಕ್ಷಣೆ ಇಲ್ಲವೇ? ಎಂದು ಪ್ರಶ್ನೆ ಮಾಡಿದೆ.
ಗೂಂಡಾಗಿರಿ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ SDPI ಪೊಲೀಸ್ ಇಲಾಖೆಗೆ ಆಗ್ರಹಿಸಿದೆ.