►ಹಲ್ಲೆಗೊಳಗಾದವರನ್ನೇ ಬಂಧಿಸಿ ಠಾಣೆಯಲ್ಲಿ ಚಿತ್ರಹಿಂಸೆ ನೀಡಿದ ಉಳ್ಳಾಲ ಪೊಲೀಸ್!!
ಮಂಗಳೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾದ್ಯಂತ ಝೀರೋ ಡ್ರಾಪೌಟ್ ಅಭಿಯಾನ ನಡೆಸುತ್ತಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಕ್ಯಾಂಪಸ್ ಫ್ರಂಟ್ ನಾಯಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ನಂತರ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಕೂಡ ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲೆಯಲ್ಲಿ ಗಾಂಜಾ ಮಾಫಿಯಾ ಸಕ್ರಿಯವಾಗಿದೆ ಎಂಬುದಕ್ಕೆ ಈ ಘಟನೆಯು ಸ್ಪಷ್ಟ ಉದಾಹರಣೆಯಾಗಿದೆ. ನ್ಯಾಯ ಒದಗಿಸಬೇಕಾದ ಪೊಲೀಸರು ಗಾಂಜಾ ಮಾಫಿಯದೊಂದಿಗೆ ಆಂತರಿಕವಾಗಿ ಶಮಿಲಾಗಿದ್ದಾರೆಯೇ ಎಂಬುದಕ್ಕೆ ಸಾರ್ವಜನಿಕರಲ್ಲಿ ಸಂಶಯ ಮೂಡಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಡ್ರಾಪೌಟ್ ಆಗುತ್ತಿದ್ದು, ಇದನ್ನು ಮನಗಂಡು ಕ್ಯಾಂಪಸ್ ಫ್ರಂಟ್ ನಡೆಸುತ್ತಿರುವ ಝೀರೋ ಡ್ರಾಪೌಟ್ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲು ತೆರಳಿದ ಕ್ಯಾಂಪಸ್ ಫ್ರಂಟ್ ನಾಯಕರನ್ನು ಬಂಧಿಸಿ , ಠಾಣೆಯಲ್ಲಿ ಹಲ್ಲೆ ನಡೆಸಿದ ಪೋಲಿಸರ ನಡೆಯ ಕುರಿತು ತೀವ್ರ ಅಸಮಾಧಾನವಾಗಿದ್ದು, ಉನ್ನತ ಮಟ್ಟದ ಅಧಿಕಾರಿಗಳು ಇದರ ಬಗ್ಗೆ ಶೀಘ್ರ ಸೂಕ್ತವಾದ ಕ್ರಮ ಕೈಗೊಂಡು ಹಲ್ಲೆ ನಡೆಸಿದ ಗಾಂಜಾ ವ್ಯಸನಿಗಳಿನ್ನು ಬಂಧಿಸಿ, ದರ್ಪ ಮೆರೆದ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ವಜಾ ಮಾಡಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಸಾಧಿಕ್ ಜಾರತ್ತಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.