ಬೆಂಗಳೂರು: ಫ್ಯಾಸಿಸ್ಟರ ವಿರುದ್ಧ ಮತ ಚಲಾಯಿಸುವಂತೆ ಅಭಿಯಾನ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರೈತ ಸಂಘದ ಸದಸ್ಯರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಹುಮಾನ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಫ್ಯಾಸಿಸ್ಟರ ವಿರುದ್ಧ ಮತ ಚಲಾಯಿಸುವಂತೆ ಅಭಿಯಾನ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರೈತ ಸಂಘದ ಸದಸ್ಯರ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ಮಾಡಿದ್ದಾರೆ. ಇದು ರೈತರಿಗೆ ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಹುಮಾನ. ಬಿಜೆಪಿ ಸರ್ಕಾರ ರೈತರ ಆದಾಯ ದ್ವಿಗುಣ ಮಾಡುವ ವಾಗ್ದಾನ ನೀಡಿತ್ತು. ಕಳೆದ ಹತ್ತು ವರ್ಷದಲ್ಲಿ ಆದಾಯ ಕೇಳಿದ ರೈತರ ಮೇಲಿನ ದೌರ್ಜನ್ಯ ದ್ವಿಗುಣ ಮಾಡಿದೆ ಎಂದರು.