ನೂತನ ಪೊಲೀಸ್​ ಆಯುಕ್ತರ ಖಡಕ್​ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳ ಮನೆ ಮೇಲೆ ದಾಳಿ

Prasthutha|

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನೆಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ.

- Advertisement -

ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ​​ ನಡೆದಿದೆ. ನಗರದ 8 ವಿಭಾಗದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಲಾಗಿದ್ದು, 1 ಸಾವಿರಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಪೂರ್ವ ವಿಭಾಗದ ಪೋಲಿಸರು ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, KG ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ದಾಳಿ ಮಾಡಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

- Advertisement -

ಇನ್ನು ಆಗ್ನೇಯ ವಿಭಾಗದ ರೌಡಿಶೀಟರ್‌ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚುನಾವಣಾ ಸಂದರ್ಭದಲ್ಲಿ ಜೈಲು ಸೇರಿ ಬಿಡುಗಡೆಗೊಂಡಿರುವ ರೌಡಿಶೀಟರ್‌ಗಳಿಗೆ ಮತ್ತೆ ಎಚ್ಚರಿಕೆ ಕೊಡುವ ಸಲುವಾಗಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ರೌಡಿ ಆಕ್ಟಿವಿಟಿಗಳಲ್ಲಿ ಭಾಗಿಯಾಗದಂತೆಯೂ ಎಚ್ಚರಿಕೆ ಕೊಡಲಾಗಿದೆ.

ಡಿಸಿಪಿ ಸಿಕೆ ಬಾಬ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಕೋರಮಂಗಲ, ಮಡಿವಾಳ, ಆಡುಗೋಡಿ, ಮೈಕೋ ಲೇ ಔಟ್ ಸೇರಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ. ಸದ್ಯ ಹಲವು ರೌಡಿಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರ ಪತ್ತೆಯಾಗಿದೆ.



Join Whatsapp