Home ಟಾಪ್ ಸುದ್ದಿಗಳು ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಘಟಕದ ಮೇಲೆ ದಾಳಿ; ಮೂವರ ಬಂಧನ

ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಘಟಕದ ಮೇಲೆ ದಾಳಿ; ಮೂವರ ಬಂಧನ

ಚಂಡೀಗಢ: ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆ ಕುರಿತು ಖಚಿತ ಮಾಹಿತಿ ಆಧರಿಸಿ ಭೂಗತ ಪಾತಕಿಗಳಾದ ಕೆನಡಾ ಮೂಲದ ಲಖ್ಬೀರ್ ಸಿಂಗ್ ಅಲಿಯಾಸ್ ಲಾಂಡಾ ಹಾಗೂ ಪಾಕಿಸ್ತಾನ ಮೂಲದ ಹರ್ವಿಂದರ್ ಸಿಂಗ್ ರಿಂಡಾ ಜಂಟಿಯಾಗಿ ನಿರ್ವಹಿಸುತ್ತಿದ್ದ ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.


ದೆಹಲಿ ಪೊಲೀಸ್ ವಿಶೇಷ ದಳ ಹಾಗೂ ಪಂಜಾಬ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ ಒಂದು ಎಕೆ -47 ರೈಫಲ್ ಮತ್ತು ಮೂರು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.


ಲಖ್ಬೀರ್ ಸಿಂಗ್ ಎಂಬಾತ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ಜೊತೆ ಕೈಜೋಡಿಸಿರುವ ಹರ್ವಿಂದರ್ ಸಿಂಗ್‌ನ ಆಪ್ತ ಸಹಾಯಕ. ಈ ಇಬ್ಬರು ಐಎಸ್‌ಐ ಜತೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version