Home ಟಾಪ್ ಸುದ್ದಿಗಳು ಇಸ್ರೇಲ್ ಮೇಲೆ ದಾಳಿ: ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದ ರಾಯಭಾರ ಕಚೇರಿ

ಇಸ್ರೇಲ್ ಮೇಲೆ ದಾಳಿ: ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದ ರಾಯಭಾರ ಕಚೇರಿ

ಇಸ್ರೇಲ್ ಮೇಲೆ ಹಮಾಸ್ ಶನಿವಾರ ನಡೆಸಿದ ಅತಿದೊಡ್ಡ ದಾಳಿಯ ಕೆಲವೇ ಗಂಟೆಗಳ ನಂತರ, ಭಾರತವು ಇಸ್ರೇಲ್ ನಲ್ಲಿರುವ ತನ್ನ ಪ್ರಜೆಗಳಿಗೆ ಸಲಹೆಯನ್ನು ನೀಡಿದೆ. ಜಾಗರೂಕರಾಗಿರಲು ಮತ್ತು ಸುರಕ್ಷತಾ ಪ್ರೋಟೋಕಾಲ್ ಗಳನ್ನು ಗಮನಿಸುವಂತೆ ಕೇಳಿಕೊಂಡಿದೆ.


ಈ ಬಗ್ಗೆ ಇಸ್ರೇಲ್ ನಲ್ಲಿರುವ ಭಾರತದ ರಾಯಭಾರ ಕಚೇರಿ ಸಂದೇಶವನ್ನು ರವಾನೆ ಮಾಡಿದೆ. ಇಸ್ರೇಲ್ ನ ಸದ್ಯದ ಪರಿಸ್ಥಿತಿಯಲ್ಲಿ ಮನದಲ್ಲಿಟ್ಟುಕೊಂಡು, ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್ಗಳನ್ನು ಪಾಲಿಸಬೇಕು. ದಯವಿಟ್ಟು ಜಾಗರೂಕರಾಗಿರಿ, ಅನಗತ್ಯ ಓಡಾಟಗಳನ್ನು ತಪ್ಪಿಸಿ ಮತ್ತು ಸುರಕ್ಷವಾಗಿರಿ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್ಸೈಟ್ ( https://www.oref.org.il/en )ಗೆ ಭೇಟಿ ನೀಡಿ. ಜತೆಗೆ ತುರ್ತು ಸಂದರ್ಭದಲ್ಲಿ, ದಯವಿಟ್ಟು ನಮ್ಮನ್ನು (ರಾಯಭಾರ ಕಚೇರಿ) +97235226748 ಗೆ ಕರೆ ಮಾಡಿ ಅಥವಾ cons1.telaviva@ mea.gov.in ನಲ್ಲಿ ಸಂದೇಶವನ್ನು ಕಳುಹಿಸಿ. ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕೆ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಎಂದು ಸಂದೇಶವನ್ನು ನೀಡಿದೆ.

Join Whatsapp
Exit mobile version