ರೈತ ಮುಖಂಡ ರಾಕೇಶ್ ಟಿಕಾಯತ್’ಗೆ ಮಸಿ ಬಳಿದು ಹಲ್ಲೆ: ಮೂವರು ವಶಕ್ಕೆ

Prasthutha|

ಬೆಂಗಳೂರು: ರಾಷ್ಟ್ರೀಯ ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಬಂಧಿತರನ್ನು ಭರತ್ ಶೆಟ್ಟಿ, ದಿಲೀಪ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದ್ದು, ರಾಕೇಶ್ ಟಿಕಾಯತ್ ನೀಡುವ ದೂರನ್ನು ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದೆಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಿಂದಾಗಿ ಸ್ಥಳದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

- Advertisement -

ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲಿನ ಭ್ರಷ್ಟಾಚಾರದ ಕುರಿತು ಚರ್ಚೆ ನಡೆಸಲು ಕರೆದಿದ್ದ ಈ ಸಭೆಯಲ್ಲಿ ಗಲಾಟೆ ನಡೆದಿದ್ದು, ರಾಕೇಶ್ ಟಿಕಾಯತ್ ಅವರಿಗೆ ಮಸಿ ಬಳಿದು ಮೈಕ್ ನಿಂದ ಹಲ್ಲೆ ನಡೆಸಲಾಗಿತ್ತು.



Join Whatsapp