Home ಕರಾವಳಿ SDPI ಕಚೇರಿಗಳ ಮೇಲೆ ದಾಳಿ| ವಿಚಾರಣೆ ಮುಂದೂಡಿದ ಹೈಕೋರ್ಟ್

SDPI ಕಚೇರಿಗಳ ಮೇಲೆ ದಾಳಿ| ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಚೇರಿಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿರುವ ಸೊತ್ತುಗಳಿಗೆ ಹಾಕಲಾಗಿರುವ ಸೀಲ್‌ (ಮೊಹರು) ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಫೆ. 16ಕ್ಕೆ ಮುಂದೂಡಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತದ ಕ್ರಮವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿ ಎಸ್‌ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದಾತ್‌ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ವೇಳೆ ಸರಕಾರದ ಪರ ವಕೀಲರು ವಾದ ಮಾಡಿ, ಕೇಂದ್ರ ಸರಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗಿದೆ. ಆದರೆ, ಅರ್ಜಿಯಲ್ಲಿ ಕೇಂದ್ರ ಸರಕಾರವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ ಎಂದರು.

ಕೇಂದ್ರ ಸರಕಾರ ನಿರ್ದೇಶನ ನೀಡಿದ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿದ ಹೈಕೋರ್ಟ್‌ ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿದೆ.

Join Whatsapp
Exit mobile version