ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ-ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ: ಎಚ್.ಡಿ.ಕುಮಾರಸ್ವಾಮಿ

Prasthutha|

ಬೆಂಗಳೂರು: ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

- Advertisement -


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ಬಾಲಕನ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ ಎಂದರು.
ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು.


ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.



Join Whatsapp