ಫರಂಗಿಪೇಟೆ ಮಸೀದಿಯ ಮುಅಝ್ಝಿನ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | ಸುರತ್ಕಲ್ ಮುಸ್ಲಿಂ ಐಕ್ಯತಾ ವೇದಿಕೆ ಖಂಡನೆ

Prasthutha|

ಮಂಗಳೂರು: ನಿನ್ನೆ ತಡ ರಾತ್ರಿ ಮಂಗಳೂರು ಸಮೀಪದ ಫರಂಗಿಪೇಟೆ ಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಯ ಮುಅಝ್ಝಿನ್ ಅವರ ಮೇಲೆ ದುಷ್ಕರ್ಮಿಗಳು ಏಕಾಏಕಿ ಮಸೀದಿಗೆ ನುಗ್ಗಿ ಹಲ್ಲೆ ನಡೆಸಿದ ಘಟನೆಯನ್ನು ಮುಸ್ಲಿಂ ಐಕ್ಯತಾ ವೇದಿಕೆ ಸುರತ್ಕಲ್ ತೀವ್ರವಾಗಿ ಖಂಡಿಸಿದೆ.

- Advertisement -

“ದುಷ್ಕರ್ಮಿಗಳ ಈ ಕೃತ್ಯವು ಮತೀಯ ಸೌಹಾರ್ದವನ್ನು ಕೆಡಿಸುವ ಹುನ್ನಾರವಾಗಿದೆ. ಮುಸ್ಲಿಮ್ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ ನಡೆಸಿ ಆ ಮೂಲಕ ಒಂದು ಧರ್ಮದ ಜನರ ಭಾವನೆಗಳನ್ನು ಕೆರಳಿಸಿ,  ಕೋಮು ಪ್ರಚೋದನೆಗೆ ಅವಕಾಶ ಮಾಡುವ  ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ. ಇತ್ತೀಚೆಗೆ ಇಂತಹ ಹಲವಾರು ಕೋಮು ಪ್ರಚೋದನಾ ಕೃತ್ಯಗಳು ಅಲ್ಲಲ್ಲಿ ಕಾಣತೊಡಗಿವೆ. ಮೊದಲೇ ಕೋಮು ಸೂಕ್ಷ್ಮವಾದ ಈ ಜಿಲ್ಲೆಯಲ್ಲಿ ಇದರಿಂದಾಗಿ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟಾಗುತ್ತಿವೆ. ಈ ಕೃತ್ಯವನ್ನು ಯಾರೇ ಮಾಡಿದರೂ, ಗೃಹ ಇಲಾಖೆ ಕೂಡಲೇ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಿ ನ್ಯಾಯವನ್ನು  ಒದಗಿಸಬೇಕು. ಇಲ್ಲವಾದಲ್ಲಿ  ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದು” ಎಂದು ಮುಸ್ಲಿಂ ಐಕ್ಯತಾ ವೇದಿಕೆ ಸುರತ್ಕಲ್ ಇದರ ಅಧ್ಯಕ್ಷರಾದ ಅಶ್ರಫ್ ಬದ್ರಿಯಾ ತಿಳಿಸಿದ್ದಾರೆ.



Join Whatsapp