ತಾಲಿಬಾನ್ ರೀತಿಯಲ್ಲಿ ಟಿಎಂಸಿ ನಾಯಕರ ಮೇಲೆ ದಾಳಿ ಮಾಡಿ: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

Prasthutha|

ಅಗರ್ತಲಾ: ತೃಣಮೂಲ ಕಾಂಗ್ರೆಸ್ ನಾಯಕರು ಅಗರ್ತಲಾ ವಿಮಾನ ನಿಲ್ದಾಣಕ್ಕೆ ಬಂದರೆ ತಾಲಿಬಾನಿ ರೀತಿಯಲ್ಲಿ ದಾಳಿ ಮಾಡಬೇಕು ಎಂದು ತ್ರಿಪುರಾದ ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕ ಅರುಣ್ ಚಂದ್ರ ಭೌಮಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -


25 ವರ್ಷಗಳ ಸುದೀರ್ಘ ಕಮ್ಯುನಿಸ್ಟ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಅಧಿಕಾರಕ್ಕೆ ಬಂದ ತ್ರಿಪುರಾದ ಬಿಪ್ಲವ್ ಕುಮಾರ್ ದೇವ್ ನೇತೃತ್ವದ ಸರ್ಕಾರಕ್ಕೆ ಟಿಎಂಸಿ ಹಾನಿ ಮಾಡಲು ಪ್ರಯತ್ನಿಸುತ್ತಿದೆ. ಇವೆಲ್ಲವೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಪ್ರೇರಣೆಯಿಂದ ನಡೆಯುತ್ತಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವರಾದ ಪ್ರತಿಮಾ ಭೌಮಿಕ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.


ಇದು ಕೇವಲ ಶಾಸಕರ ಅಭಿಪ್ರಾಯವಾಗಿದೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಥಳೀಯ ಬಿಜೆಪಿ ಘಟಕ ತಿಳಿಸಿದೆ.

Join Whatsapp