ಉಕ್ರೇನ್: ರಷ್ಯಾ ಯುದ್ಧ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಹೊಸ ಹೇಳಿಕೆಯೊಂದನ್ನ ಬಿಡುಗಡೆ ಮಾಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿರುವಂತೆ, ಉಕ್ರೇನ್ ನಲ್ಲಿ ತ್ವರಿತವಾಗಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ದೇಶದ ಪಶ್ಚಿಮ ಭಾಗಗಳಲ್ಲಿ ದಾಳಿ ಸೇರಿದಂತೆ, ಉಕ್ರೇನ್ʼನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನ ತಾತ್ಕಾಲಿಕವಾಗಿ ಪೋಲೆಂಡ್ʼಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ಮುಂದಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮರುಮೌಲ್ಯಮಾಪನ ಮಾಡಲಾಗುವುದು’ ಎಂದು ಸಚಿವಾಲಯ ತಿಳಿಸಿದೆ