Home ಟಾಪ್ ಸುದ್ದಿಗಳು ದಾಳಿ ಮಾಡಿದ ದುಷ್ಕರ್ಮಿ ಆಕ್ರಮಣಕಾರಿಯಾಗಿ ವರ್ತಿಸಿದ, ಆದರೆ ಆಭರಣಗಳನ್ನು ಮುಟ್ಟಿರಲಿಲ್ಲ: ಕರೀನಾ ಕಪೂರ್

ದಾಳಿ ಮಾಡಿದ ದುಷ್ಕರ್ಮಿ ಆಕ್ರಮಣಕಾರಿಯಾಗಿ ವರ್ತಿಸಿದ, ಆದರೆ ಆಭರಣಗಳನ್ನು ಮುಟ್ಟಿರಲಿಲ್ಲ: ಕರೀನಾ ಕಪೂರ್

ಮುಂಬೈ: ತಮ್ಮ ಪತಿ ಹಾಗೂ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದ ದುಷ್ಕರ್ಮಿಯು ಆಕ್ರಮಣಕಾರಿಯಾಗಿ ವರ್ತಿಸಿದ. ಆದರೆ, ಬಹಿರಂಗವಾಗಿಯೇ ಇಟ್ಟಿದ್ದ ಆಭರಣಗಳನ್ನು ಮುಟ್ಟಿರಲಿಲ್ಲ ಎಂದು ನಟಿ ಕರೀನಾ ಕಪೂರ್‌ ಪೊಲೀಸರಿಗೆ ತಿಳಿಸಿದ್ದಾರೆ.
ಮುಂಬೈನ ಬಾಂದ್ರಾದಲ್ಲಿರುವ ‘ಸದ್ಗುರು ಶರಣ್’ ಅಪಾರ್ಟ್‌ ಮೆಂಟ್‌ ನ 12ನೇ ಮಹಡಿಯಲ್ಲಿರುವ ದಂಪತಿಯ ನಿವಾಸಕ್ಕೆ ನುಗ್ಗಿದ್ದ ದುಷ್ಕರ್ಮಿಯು, ಸೈಫ್‌ ಅವರ ಮೇಲೆ ಗುರುವಾರ ಮುಂಜಾನೆ ಚಾಕುವಿನಿಂದ ದಾಳಿ ಮಾಡಿದ್ದ.

ಗಂಭೀರವಾಗಿ ಗಾಯಗೊಂಡಿರುವ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಕರೀನಾ, ಹೊಡೆದಾಟದ ವೇಳೆ ದುಷ್ಕರ್ಮಿಯು ತುಂಬಾ ಆಕ್ರಮಣಕಾರಿಯಾಗಿ ವರ್ತಿಸಿದ. ಆದರೆ, ಕಾಣುವಂತೆಯೇ ತೆರೆದ ಸ್ಥಳದಲ್ಲಿ ಇಟ್ಟಿದ್ದ ಆಭರಣಗಳನ್ನು ಆತ ಮುಟ್ಟಿರಲಿಲ್ಲ ಎಂದು ತಿಳಿಸಿದ್ದಾರೆ. ಅವರಿಂದ ಇನ್ನಷ್ಟು ಹೇಳಿಕೆಗಳನ್ನು ಪಡೆದುಕೊಳ್ಳಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದು 48 ಗಂಟೆಗಳು ಕಳೆದಿವೆ. ಪೊಲೀಸರು 30 ತಂಡಗಳನ್ನು ರಚಿಸಿದ್ದರೂ, ದುಷ್ಕರ್ಮಿ ಪತ್ತೆಯಾಗಿಲ್ಲ

Join Whatsapp
Exit mobile version