Home ಟಾಪ್ ಸುದ್ದಿಗಳು ಮನವಿ ಸ್ವೀಕರಿಸಲು ಬಾರದ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ: ಕಚೇರಿ ಪೀಠೋಪಕರಣ ಧ್ವಂಸ

ಮನವಿ ಸ್ವೀಕರಿಸಲು ಬಾರದ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ: ಕಚೇರಿ ಪೀಠೋಪಕರಣ ಧ್ವಂಸ

ಬೀದರ್: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಎಂಬವರು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಗೈದ ಆರೋಪದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಉದ್ವಿಗ ಸ್ಥಿತಿ ನಿರ್ಮಾಣವಾಗಿದ್ದು, ವಿವಿಧ ದಲಿತ ಪರ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಪ್ರತಿಭಟನಕಾರರ ಮನವಿಯನ್ನು ಸ್ವೀಕರಿಸಲು ತಹಶೀಲ್ದಾರ್ ಆಗಮಿಸಿಲ್ಲ ಎಂದು ಆರೋಪಿಸಿ ದಲಿತ ಸಂಘಟನೆಯ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು ಎಂದು ಹೇಳಲಾಗಿದೆ. ಮಾತ್ರವಲ್ಲ ಕಚೇರಿಯ ಪೀಠೋಪಕರಣ ಧ್ವಂಸಗೈದು ದಾಂಧಲೆ ನಡೆಸಿದ ಘಟನೆ ವರದಿಯಾಗಿದೆ.

ದಲಿತ ಸಂಘಟನೆಯ ಕಾರ್ಯಕರ್ತರಿಂದ ಹಲ್ಲೆ ಯತ್ನಕ್ಕೆ ಒಳಗಾದ ಹುಮ್ನಾಬಾದ್ ತಹಶೀಲ್ದಾರ್ ಪ್ರದೀಪ್ ಕುಮಾರ್ ಮಠಪತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯಾಯಾಧೀಶರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಪರ ಸಂಘಟನೆಗಳಿಂದ ಈ ಪ್ರತಿಭಟನೆಯನ್ನು ಆಯೋಜನೆಗೊಂಡಿತ್ತು.

Join Whatsapp
Exit mobile version