ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆಗೆ ಯತ್ನ: ವ್ಯಕ್ತಿ ಬಂಧನ

Prasthutha|

ಬಿಹಾರ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಪಾಟ್ನಾ ಜಿಲ್ಲೆಯ ಭಕ್ತಿಯಾರ್‌ ಪುರ  ಬ್ಲಾಕ್‌ ನಲ್ಲಿ ನಿತೀಶ್ ಕುಮಾರ್ ವಿಗ್ರಹಕ್ಕೆ ಮಾಲಾರ್ಪಣೆ ಮಾಡಲು ವೇದಿಕೆಯಲ್ಲಿದ್ದಾಗ ಅವರ ಮೇಲೆ ಹಲ್ಲೆ ನಡೆದಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆಯ ನಂತರ, ಭದ್ರತಾ ಸಿಬ್ಬಂದಿ ತಕ್ಷಣ ವ್ಯಕ್ತಿಯನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆತನನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. 



Join Whatsapp