Home ಟಾಪ್ ಸುದ್ದಿಗಳು ಲಂಡನ್‌ ನಲ್ಲಿ ವಿದೇಶಾಂಗ ಸಚಿವ ಜೈಶಂಕರ್‌ ಮೇಲೆ ದಾಳಿಗೆ ಯತ್ನ..!

ಲಂಡನ್‌ ನಲ್ಲಿ ವಿದೇಶಾಂಗ ಸಚಿವ ಜೈಶಂಕರ್‌ ಮೇಲೆ ದಾಳಿಗೆ ಯತ್ನ..!

0

ಲಂಡನ್: ಲಂಡನ್‌ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಮೇಲೆ ಖಲಿಸ್ತಾನ್ ಗುಂಪೊಂದು ದಾಳಿ ನಡೆಸಲು ಯತ್ನಿಸಿದೆ ಎನ್ನವ ಮಾಹಿತಿ ಲಭ್ಯವಾಗಿದೆ.

ವರದಿಗಳ ಪ್ರಕಾರ, ಭಾರತೀಯ ಸಚಿವರು ಚೆವನಿಂಗ್ ಹೌಸ್‌ ನಲ್ಲಿ ನಡೆದ ಕಾರ್ಯಕ್ರಮದಿಂದ ಹೊರಬಂದ ನಂತರ ಈ ಘಟನೆ ನಡೆದಿದೆ. ಆನ್‌ ಲೈನ್‌ ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದನ್ನು ತೋರಿಸಲಾಗಿದೆ.

ಮತ್ತೊಂದು ವೀಡಿಯೊದಲ್ಲಿ ಖಾಲಿಸ್ತಾನ್ ಗಳು ಸ್ಥಳದ ಹೊರಗೆ ಧ್ವಜಗಳನ್ನು ಬೀಸುತ್ತಾ ಮತ್ತು ಖಲಿಸ್ತಾನಿ ಪರ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸುತ್ತಿರುವುದನ್ನು ತೋರಿಸಲಾಗಿದೆ.

ವಿದೇಶಾಂಗ ಸಚಿವ ಜೈಶಂಕರ್ ಚರ್ಚೆಯಲ್ಲಿ ಭಾಗವಹಿಸಿದ್ದ ಸ್ಥಳದ ಹೊರಗೆ ಹಲವಾರು ಖಲಿಸ್ತಾನಿ ಪರ ಬೆಂಬಲಿಗರು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ಖಲಿಸ್ತಾನಿಗಳನ್ನು ಪೊಲೀಸರು ವಶಕ್ಕೆ ಪಡೆದರು.

NO COMMENTS

LEAVE A REPLY

Please enter your comment!
Please enter your name here

Exit mobile version