ಕೊಲೆ ಯತ್ನ ಪ್ರಕರಣ: ಲಕ್ಷದ್ವೀಪದ ಮಾಜಿ ಸಂಸದನ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ

Prasthutha|

ಕೊಚ್ಚಿ: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಲಕ್ಷದ್ವೀಪದ ಮಾಜಿ ಸಂಸದ ಮುಹಮ್ಮದ್ ಫೈಝಲ್ ನ ಮರಣದಂಡನೆಗೆ ಹೈಕೋರ್ಟ್ ತಡೆ ನೀಡಿದೆ.

- Advertisement -


10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಮಾಜಿ ಸಂಸದ ಮುಹಮ್ಮದ್ ಫೈಝಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ಎಲ್ಲಾ ನಾಲ್ವರು ಆರೋಪಿಗಳು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಈ ತೀರ್ಪು ನೀಡಿದ್ದಾರೆ.

ಮುಹಮ್ಮದ್ ಫೈಝಲ್ ಮತ್ತು ಆತನ ಸಹೋದರ ಸೇರಿದಂತೆ ನಾಲ್ವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆದರೆ, ಉನ್ನತ ನ್ಯಾಯಾಲಯದಿಂದ ಅಂತಿಮ ತೀರ್ಪು ಬರುವವರೆಗೆ ತೀರ್ಪಿನ ಅನುಷ್ಠಾನವನ್ನು ತಡೆಹಿಡಿಯಲಾಗಿದೆ.

- Advertisement -

ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಫೈಝಲ್ ಸೇರಿದಂತೆ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ಹೈಕೋರ್ಟ್ ಈ ತೀರ್ಪು ನೀಡಿದೆ.

Join Whatsapp