Home Uncategorized ಹುಲಿಯ ಉಗುರು ಮಾರಾಟಕ್ಕೆ ಯತ್ನ: ಆರೋಪಿಗಳು ಅಂದರ್

ಹುಲಿಯ ಉಗುರು ಮಾರಾಟಕ್ಕೆ ಯತ್ನ: ಆರೋಪಿಗಳು ಅಂದರ್

ಮಡಿಕೇರಿ: ಕೊಡಗು ಜಿಲ್ಲೆಯ ಮರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ನಿಂದ ಮೃತಪಟ್ಟಿದ್ದ ಹುಲಿಯ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಕೆಲ ವರ್ಷಗಳ ಹಿಂದೆ ಸಾವನಪ್ಪಿದ್ದ ಹುಲಿಯ ಬೆರಳುಗಳನ್ನು ಮಾರಟ ಮಾಡಲು ಯತ್ನಿಸಿದ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕುಶಾಲನಗರ ತಾಲೂಕಿನ ಮರೂರು ಗ್ರಾಮದ ಗಣೇಶ್, ಯೋಗೇಶ್, ರಮೇಶ್, ನಟೇಶ್ ದೊರೇಶ್, ನವೀನ್, ಶೇಖರ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ.

ವರ್ಷದ ಹಿಂದೆ ಕಾಡು ಹಂದಿಗಳಿಂದ ಬೆಳೆ ರಕ್ಷಿಸಲು ತಂತಿ ಬೇಲಿಗೆ ಗಣೇಶ್ ಮತ್ತು ಯೋಗೇಶ್ ವಿದ್ಯುತ್ ಹರಿಸಿದ್ದರು. ಆದರೆ ಕಾಡು ಹಂದಿಗೆ ಇಟ್ಟಿದ್ದ ವಿದ್ಯುತ್ ಹುಲಿಗೆ ತಗುಲಿ ಸ್ಥಳದಲ್ಲಿಯೇ ಹುಲಿ ಮೃತಪಟ್ಟಿದೆ. ಹುಲಿ ಮೃತಪಟ್ಟಿರುವುದರ ಬಗ್ಗೆ ಯಾರಿಗೂ ಮಾಹಿತಿ ನೀಡದೇ, ಹುಲಿ ಉಗುರು ತೆಗೆದುಕೊಂಡು ಹುಲಿ ಕಲ್ಬೇರಳನ್ನು ಹೂತಿ ಹಾಕಿದ್ದರು.

ಪೊಲೀಸರು ದಾಳಿ ನಡೆಸಿ 17 ಹುಲಿ ಉಗುರು, ಒಂದು ಕೋರೆ ಹಲ್ಲು, ಚರ್ಮದ ಚೂರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Join Whatsapp
Exit mobile version