Home ಟಾಪ್ ಸುದ್ದಿಗಳು ಸಿಎಂ ನಿವಾಸ ಮುತ್ತಿಗೆ ಯತ್ನ:ಕೈ ನಾಯಕರ ವಿರುದ್ಧ ಎಫ್ಐಆರ್ ದಾಖಲು

ಸಿಎಂ ನಿವಾಸ ಮುತ್ತಿಗೆ ಯತ್ನ:ಕೈ ನಾಯಕರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪರ ರಾಜೀನಾಮೆ, ಬಂಧನಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಹೈ ಗ್ರೌಂಡ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಸೇರಿದಂತೆ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನ ಕೆಲವು ನಾಯಕರನ್ನು  ಪೊಲೀಸರು ವಶಕ್ಕೆ ಪಡೆದಿದ್ದರು.

ರೇಸ್ ವ್ಯೂ ಹೋಟೆಲ್ ಬಳಿ ಅನುಮತಿ ಇಲ್ಲದೇ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಿಪಡಿಸಿ ಪತ್ರಿಭಟನೆ ನಡೆಸಿದ್ದ ಆರೋಪದಡಿ ಕಾಂಗ್ರೆಸ್ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 143, 341 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Join Whatsapp
Exit mobile version