ನವದೆಹಲಿ: ದೇಶದಲ್ಲಿರುವ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿವರ್ತಿಸುವ ಯಾವುದೇ ಪ್ರಯತ್ನವು ದೇಶವನ್ನು ವಿಭಜಿಸುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್, ಖ್ಯಾತ ಅರ್ಥಶಾಸ್ತ್ರಜ್ಞ ರಘುರಾಮ್ ರಾಜನ್ ಎಚ್ಚರಿಸಿದ್ದಾರೆ.
ರಾಯ್’ಪುರದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ ಆಲ್ ಇಂಡಿಯಾ ಪ್ರೆಫೆಷನಲ್ಸ್ ನ 5ನೇ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.
ಒಂದು ದೇಶದ ರಾಜಕಾರಣಿಗಳು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಉದ್ಯೋಗ ಬಿಕ್ಕಟ್ಟು ಸೃಷ್ಟಿಸಿದಾಗ ಏನಾಗುತ್ತದೆ ಎಂಬುದಕ್ಕೆ ಶ್ರೀಲಂಕಾದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಒಂದು ಉತ್ತಮ ಉದಾಹರಣೆಯಾಗಿದೆ ಎಂದು ರಾಜನ್ ತಿಳಿಸಿದರು.
ಭಾರತದ ಭವಿಷ್ಯವು ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳನ್ನು ಬಲಪಡಿಸುವಲ್ಲಿ ಅಡಗಿದೆಯೇ ಹೊರತು ಅವುಗಳನ್ನು ದುರ್ಬಲಗೊಳಿಸುವುದರಲ್ಲಿ ಅಲ್ಲ ಎಂದು ಅವರು ಸಾಂದರ್ಭಿಕವಾಗಿ ಹೇಳಿದರು.