Home ಟಾಪ್ ಸುದ್ದಿಗಳು ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತಪಡಿಸುವಂತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು.

ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

Join Whatsapp
Exit mobile version