ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ: ಮೃತರ ಸಂಖ್ಯೆ 17ಕ್ಕೆ ಏರಿಕೆ

Prasthutha|

ಬೆಂಗಳೂರು: ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ರಾಜೇಶ್ ಎನ್ನುವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು (ಅಕ್ಟೋಬರ್ 18) ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದರೊಂದಿಗೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

- Advertisement -


ಇದೇ ಅಕ್ಟೋಬರ್ 07ರಂದು ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಪರಿಣಾಮ ಅಂದೇ 15 ಜನ ಸಜೀವ ದಹನವಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಈಗಾಗಲೇ ವೆಂಕಟೇಶ್ ಮೃತಪಟ್ಟಿದ್ದು, ಇಂದು ಇನ್ನೋರ್ವ ಯುವಕ ರಾಜೇಶ್ ಸಾವನ್ನಪ್ಪಿದ್ದಾನೆ. ಈ ಮೂಲಕ ಗಾಯಗೊಂಡವರಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಅಂಗಡಿ ಮಾಲೀಕ ನವೀನ್ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp