ಅತ್ತಿಬೆಲೆ ಪಟಾಕಿ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

Prasthutha|

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

- Advertisement -

ಮೃತನನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು (ಗುರುವಾರ) ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಇನ್ನೇನು ದೀಪಾವಳಿ ಹತ್ತಿರ ಬರುತ್ತಿದೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ ಹಾಗೂ ಈತನ ಸ್ನೇಹಿತ ಪಟಾಕಿ ಖರೀದಿಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ ದುರಂತ ಸಂಭವಿಸಿದೆ