ಆಸ್ಟ್ರೇಲಿಯಾದ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಇನ್ನಿಲ್ಲ

Prasthutha|

ಮೆಲ್ಬೋರ್ನ್: ಆಸ್ಟ್ರೇಲಿಯಾದ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

 52 ವರ್ಷ ವಯಸ್ಸಾದ ಶೇನ್ ವಾರ್ನ್, ಥೈಲ್ಯಾಂಡ್‌ನಲ್ಲಿ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಫಾಕ್ಸ್ ಕ್ರಿಕೆಟ್ ವರದಿ ಮಾಡಿದೆ.

 

- Advertisement -

ವಾರ್ನ್ ಅವರು ಥಾಯ್ಲೆಂಡ್‌ನ ವಿಲ್ಲಾದಲ್ಲಿ ನೆಲೆಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ವೈದ್ಯಕೀಯ ತಂಡದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ ಎಂದು ವಾರ್ನ್​ ಅವರ ಆಪ್ತ ವಲಯ ಮಾಹಿತಿ ನೀಡಿದೆ.

ಆಸ್ಟ್ರೇಲಿಯಾ ಪರ 145 ಟೆಸ್ಟ್‌ ಹಾಗೂ 194 ಏಕದಿನ ಪಂದ್ಯಗಳಲ್ಲಿ ಆಡಿದ್ದ ವಾರ್ನ್‌, ಕ್ರಮವಾಗಿ 708 ಮತ್ತು 293 ವಿಕೆಟ್‌ಗಳನ್ನು ಕಬಳಿಸಿದ್ದರು.

ಐಪಿಎಲ್‌ನ ಮೊದಲ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್‌ ತಂಡದ ನಾಯಕರಾಗಿದ್ದ ವಾರ್ನ್‌, ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದರು.

Join Whatsapp