ಲಾಕ್‌ಡೌನ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಆಸ್ಟ್ರೇಲಿಯಾ ನಾಗರಿಕರು; ಪೊಲೀಸರೊಂದಿಗೆ ಘರ್ಷಣೆ

Prasthutha|

ಮೆಲ್ಬೋರ್ನ್: ಕೋವಿಡ್ ನಿಯಂತ್ರಣದ ಭಾಗವಾಗಿ ಆಸ್ಟ್ರೇಲಿಯಾ ಸರ್ಕಾರ ವಿಧಿಸಿರುವ ಲಾಕ್‌ಡೌನ್ ವಿರುದ್ಧ ಜನರು ಬೀದಿಗಿಳಿದಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್ ನಂತಹ ನಗರಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ.

- Advertisement -

ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸರ್ಕಾರ ಸಾವಿರಾರು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿದೆ. ಮೆಲ್ಬೋರ್ನ್‌ನಲ್ಲಿ ಸಾವಿರಾರು ಜನರು ಜಮಾಯಿಸಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ವೀಡಿಯೋ ವೀಕ್ಷಿಸಿ….

- Advertisement -

ಜೂನ್ ತಿಂಗಳಿಂದ ಆಸ್ಟ್ರೇಲಿಯಾದಲ್ಲಿ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಡ್ನಿ, ಮೆಲ್ಬೋರ್ನ್ ಮತ್ತು ರಾಜಧಾನಿ ಕ್ಯಾನ್ಬೆರಾದಲ್ಲಿ ಕಠಿಣ ಲಾಕ್‌ಡೌನ್‌ ವಿಧಿಸಲಾಗಿದೆ. ಇದರಿಂದಾಗಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

https://twitter.com/GoldIsMoney79/status/1439105399274233858?ref_src=twsrc%5Etfw%7Ctwcamp%5Etweetembed%7Ctwterm%5E1439105399274233858%7Ctwgr%5E%7Ctwcon%5Es1_&ref_url=https%3A%2F%2Fwww.madhyamam.com%2Fworld%2Fanti-lockdown-protests-intensify-in-australia-thousands-take-to-the-streets-clashes-with-police-video-849439
Join Whatsapp