ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ರಾಡ್ ಮಾರ್ಷ್ ಇನ್ನಿಲ್ಲ

Prasthutha|

ಆಸ್ಟ್ರೇಲಿಯಾದ ಕ್ರಿಕೆಟ್ ಆಟಗಾರ ರಾಡ್ ಮಾರ್ಷ್ (74) ಅವರು ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

- Advertisement -

ಇದೇ ಫೆಬ್ರವರಿ 24ರಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಹೃದಯಾಘಾತಕ್ಕೊಳಗಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ಗೆ ಸಾಗಿಸುವ ದಾರಿಯಲ್ಲಿ ಕೋಮಾಗೆ ಜಾರಿದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

1970-80 ರ ಅವಧಿಯಲ್ಲಿ ಒಟ್ಟು 96 ಟೆಸ್ಟ್, 92 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆಸ್ಟ್ರೇಲಿಯಾದ ಅತ್ಯುತ್ತಮ ವಿಕೆಟ್ ಕೀಪರ್ ಗಳಲ್ಲಿ ಒಬ್ಬರು ಎಂದು ಖ್ಯಾತಿ ಪಡೆದಿದ್ದರು.

- Advertisement -

ರಾಡ್ ಮಾರ್ಷ್ ನಿಧನಕ್ಕೆ ಕ್ರಿಕೆಟ್ ಜಗತ್ತಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Join Whatsapp