ಭಾರತದಿಂದ ಆಸ್ಟ್ರೇಲಿಯಾಕ್ಕೆ ಮರಳಿ ಬಂದರೆ 5 ವರ್ಷ ಜೈಲು ಶಿಕ್ಷೆ ಗ್ಯಾರಂಟಿ !

Prasthutha|

ಕಳೆದ 14 ದಿನಗಳಿಂದ ಭಾರತ ಪ್ರವಾಸದಲ್ಲಿದ್ದು, ಸ್ವದೇಶಕ್ಕೆ ಮರಳುವ ಆಸ್ಟ್ರೇಲಿಯಾದ ನಾಗರಿಕರಿಗೆ ಅಲ್ಲಿನ ಸರಕಾರ ಕಠಿಣ ನಿರ್ಬಂಧ ವಿಧಿಸಿದೆ. ಅಂತಹವರಿಗೆ 5 ವರ್ಷಗಳ ಜೈಲು ಶಿಕ್ಷೆ ಅಥವಾ 66,000 ಸಾವಿರ ಆಸ್ಟ್ರೇಲಿಯನ್ ಡಾಲರ್ (ಸುಮಾರು 38 ಲಕ್ಷ ರೂಪಾಯಿ) ದಂಡ ವಿಧಿಸಲಿದೆ ಎಂಬ ಆದೇಶ ಹೊರಡಿಸಿದೆ. ಭಾರತದಲ್ಲಿ ಕೊರೋನಾ ಎರಡನೇ ಅಲೆ ಸ್ಫೊಟಗೊಂಡಿದ್ದು, ಪ್ರತಿದಿನ 3.5 ಲಕ್ಷಕಿಂತಲೂ ಅಧಿಕ ಪ್ರಕರಣಗಳು ವರದಿಯಾಗುತ್ತಿದೆ.

- Advertisement -

ಆಸ್ಟ್ರೇಲಿಯಾದ ಈ ಹೊಸ ನಿಯಮ ಇಂದಿನಿಂದ ಜಾರಿಗೆ ಬರಲಿದೆ ಎಂದು ಸರಕಾರಿ ಮೂಲಗಳು ತಿಳಿಸಿದೆ. ನಿಯಮ ಉಲ್ಲಂಘಿಸುವವರಿಗೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Join Whatsapp