ಲೇಖಕ, ಕನ್ನಡದ ಹಿರಿಯ ನಟ ಗೋವಿಂದರಾವ್‌ ನಿಧನ

Prasthutha|

ಬೆಂಗಳೂರು: ಲೇಖಕ, ಮಾಜಿ ಶಿಕ್ಷಣ ಸಚಿವ ಹಾಗೂ ಕನ್ನಡದ ಹಿರಿಯ ನಟ ಜಿ.ಕೆ ಗೋವಿಂದರಾವ್‌ ಅವರು ಇಂದು ಹುಬ್ಬಳ್ಳಿಯ ತಮ್ಮ ಮಗಳ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ.

- Advertisement -

ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.

ಅವರ ಪ್ರಕಟಿತ ಕೃತಿಗಳು- ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್‌ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್.

- Advertisement -

ಜಿ.ಕೆ.ಗೋವಿಂದ ರಾವ್ ಗ್ರಹಣ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಕನ್ನಡ ಟಿ ವಿ ಧಾರಾವಾಹಿಗಳಾದ ಮಹಾ ಪರ್ವದಲ್ಲಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು, ಕೂಡ ಅವರನ್ನು ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರಗಳಲ್ಲಿ ಅಧಿಕೃತ ಸಂಪನ್ಮೂಲ ವ್ಯಕ್ತಿ ಎಂದು ಪರಿಗಣಿಸಲಾಗಿತ್ತು.


Join Whatsapp