ವಿಟ್ಲ | ಆಟೋ ರಿಕ್ಷಾ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

Prasthutha|

ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.

- Advertisement -


ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.

ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.

- Advertisement -


ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.