ಕಾಮನ್‌ವೆಲ್ತ್‌ ಗೇಮ್ಸ್‌ | ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಅವಿನಾಶ್ ಸಬ್ಳೆ

Prasthutha: August 6, 2022

ಬರ್ಮಿಂಗ್‌ಹ್ಯಾಮ್‌ನಲ್ಲಿ  ನಡೆಯುತ್ತಿರುವ 22ನೇ ಆವೃತ್ತಿಯ ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಭಾರತದ ಓಟಗಾರ ಅವಿನಾಶ್ ಸಬ್ಳೆ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. 8:11:20 ನಿಮಿಷದಲ್ಲಿ ಗುರಿ ತಲುಪಿದ ಸಬ್ಳೆ, ಬೆಳ್ಳಿ ಪದಕ ಗೆಲ್ಲುವುದರ ತಮ್ಮ ವೈಯಕ್ತಿಕ ಅತ್ಯುತ್ತಮ ಪ್ರದರ್ಶನ ಮತ್ತು ರಾಷ್ಟ್ರೀಯ ದಾಖಲೆಯನ್ನು ಸ್ಥಾಪಿಸಿದರು.

ಇತ್ತೀಚಗಷ್ಟೇ ಓರೆಗಾನ್‌ನ ಯುಜೀನ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್ ಸ್ಪರ್ಧೆಯ ಫೈನಲ್‌ನಲ್ಲಿ ಅವಿನಾಶ್ 11ನೇ ಸ್ಥಾನ ಪಡೆದಿದ್ದರು. ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಇದುವರೆಗೂ ಹೆಚ್ಚಿನ ಕೂಟಗಳಲ್ಲಿ ಕೀನ್ಯಾದ ಅಥ್ಲೀಟ್‌ಗಳು ಮಾತ್ರ 3000 ಮೀಟರ್ಸ್ ಸ್ಟೀಪಲ್‌ಚೇಸ್‌ನಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದಿದ್ದರು. ಆದರೆ ಸಬ್ಳೆ ಇದೇ ಮೊದಲ ಬಾರಿಗೆ ಪದಕ ಪೀಠದಲ್ಲಿ ತಿರಂಗಾವನ್ನು ಹಾರಾಡಿಸಿದ್ದಾರೆ.

ಫಿನಿಶಿಂಗ್‌ ಪಾಯಿಂಟ್‌ವರೆಗೂ ಕೀನ್ಯಾದ ಇಬ್ರಾಹಿಂ ಕಿಬಿವೋಟ್‌ಗೆ ತೀವ್ರ ಪೈಪೋಟಿ ನೀಡಿದ್ದ ಅವಿನಾಶ್‌, 0.05 ಸೆಕೆಂಡ್‌ ಅಂತರದಲ್ಲಿ ಚಿನ್ನದ ಪದಕದಿಂದ ವಂಚಿತರಾದರು.

ಮತ್ತೊಂದೆಡೆ ಬಾಕ್ಸಿಂಗ್ ಹಾಗೂ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಹೆಚ್ಚಿನ ಪದಕಗಳು ಖಚಿತವಾಗಿದೆ. ಈಗಾಗಲೇ ಅಮಿತ್, ನೀತು​ ಫೈನಲ್​ಗೆ ಲಗ್ಗೆ ಹಾಕಿದ್ದಾರೆ. ಕಾಮನ್​ವೆಲ್ತ್ ಗೇಮ್ಸ್​​ನಲ್ಲಿ ಭಾರತ ಇಲ್ಲಿಯವರೆಗೆ 9 ಚಿನ್ನ, 10 ಬೆಳ್ಳಿ ಹಾಗೂ 9 ಕಂಚಿನ ಸಾಧನೆ ಮಾಡಿದ್ದು, ಒಟ್ಟು 28 ಪದಕ ಮುಡಿಗೇರಿಸಿಕೊಂಡು ಭಾರತ 5ನೇ ಸ್ಥಾನದಲ್ಲಿದೆ. 52 ಚಿನ್ನ, 44 ಬೆಳ್ಳಿ ಹಾಗೂ 46 ಕಂಚು ಗೆದ್ದಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ