ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ʼವಾರ್ಷಿಕ ಬ್ಯಾರಿ-ಬ್ಯಾರ್ದಿʼ ಪ್ರಶಸ್ತಿ ಪ್ರದಾನ

Prasthutha|

ಬೆಂಗಳೂರು: ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ರವಿವಾರ 2023-24ನೆ ಶೈಕ್ಷಣಿಕ ಸಾಲಿನ ಬ್ಯಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಬ್ಯಾರಿ-ಬ್ಯಾರ್ದಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಎಚ್ ಬಿಆರ್ ಲೇಔಟ್ ನಲ್ಲಿರುವ ಬ್ಯಾರಿ ಸೌಹಾರ್ದ ಭವನದಲ್ಲಿ ನಡೆಯಿತು.

- Advertisement -


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ, ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಬ್ಯಾರಿ ಭಾಷಿಕ ಸಮುದಾಯವು ಸಮಾಜಕ್ಕೆ ಅಪಾರ ಕೊಡುಗೆಗಳನ್ನು ನೀಡುತ್ತಿದ್ದು, ಎಲ್ಲರೊಂದಿಗೆ ಜೊತೆಗೂಡಿ ಸೌಹಾರ್ದತೆಗೆ ಹೆಚ್ಚು ಆದ್ಯತೆ ನೀಡುತ್ತಿವೆ. ಬ್ಯಾರಿ ಸಮುದಾಯದ ಸೌಹಾರ್ದತೆಯು ಜಗತ್ತಿಗೆ ಪಸರಿಸಲಿ ಮತ್ತು ನಾಡಿಗೆ ಮಾದರಿಯಾಗಲಿ ಎಂದು ಹೇಳಿದ್ದಾರೆ.


ಈ ಸಂದರ್ಭ ಹರೇಕಳದ ಮೈಮುನಾ-ಮರ್ಜೀನಾ ಅವರಿಗೆ ವರ್ಷದ ಬ್ಯಾರ್ದಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಬ್ಯಾರಿ ಸೌಹಾರ್ದ ಭವನ ಕಟ್ಟಡ ಸಮಿತಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ, ಬ್ಯಾರಿ ಸೌಹಾರ್ದ ಭವನ ಕಟ್ಟಡ ಸಮಿತಿಯ ಸದಸ್ಯ ಉಮರ್ ಟೀಕೆ, ಇಕ್ಬಾಲ್ ಅಹ್ಮದ್, ಜಿ.ಎ. ಬಾವ, ಬ್ಯಾರಿ ಸೌಹಾರ್ದ ಭವನದ ಮುಖ್ಯ ಆಡಳಿತಾಧಿಕಾರಿ ಅತ್ತೂರು ಚೆಯ್ಯಬ್ಬ ಮತ್ತಿತರರು ಉಪಸ್ಥಿತರಿದ್ದರು.

Join Whatsapp