Home ಕರಾವಳಿ ವಿಶ್ವ ಜಲದಿನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಮಂಗಳೂರು ವತಿಯಿಂದ ಪಣಂಬೂರು ಬೀಚ್‌ನಲ್ಲಿ ಜಾಗೃತಿ ಹಾಗೂ ಸ್ವಚ್ಛತಾ...

ವಿಶ್ವ ಜಲದಿನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಮಂಗಳೂರು ವತಿಯಿಂದ ಪಣಂಬೂರು ಬೀಚ್‌ನಲ್ಲಿ ಜಾಗೃತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು : ವಿಶ್ವ ಜಲ ದಿನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಪಣಂಬೂರು ಬೀಚ್‌ನಲ್ಲಿ ನೀರಿನ ಮಹತ್ವದ ಕುರಿತಾದ ಜಾಗೃತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

    ಬೀಚ್‌ಗಳಲ್ಲಿ ತ್ಯಾಜ್ಯಗಳನ್ನು ಎಸೆದು, ಕಸ ಕಡ್ಡಿಗಳಿಂದ ಸಮುದ್ರದ ದಡ ಮಲಿನವಾಗುತ್ತಿದೆ, ಇದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೀಚ್‌ ಬಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಗ್ರಾಮಾಂತರ ಅಧ್ಯಕ್ಷರಾದ ಶರಫುದ್ದೀನ್, ಕಾರ್ಯದರ್ಶಿ ಅಶ್ರಫ್ ಪೊರ್ಕೊಡಿ, ಸಮಿತಿ ಸದಸ್ಯರಾದ ನಬೀಲ್ , ಝಾಹಿರ್ ಮತ್ತಿತ್ತರು ಉಪಸ್ಥಿತರಿದ್ದರು.

Join Whatsapp
Exit mobile version