ಕೊರೋನಾ ಡೆಲ್ಟಾ, ಆಲ್ಫಾ ಬಳಿಕ ದೇಶದಲ್ಲಿ AY 4.2 ತಳಿ ಪತ್ತೆ | ಅಪಾಯವೆಷ್ಟು?

Prasthutha|

ನವದೆಹಲಿ: ಈ ಹಿಂದೆ ಬ್ರಿಟನ್ ನಲ್ಲಿ ಪತ್ತೆಯಾಗಿದ್ದ ಕೊರೋನಾ ಡೆಲ್ಟಾ ರೂಪಾಂತರಿಯ ಹೊಸ ತಳಿ AY 4.2 ಇದೀಗ ಭಾರತದಲ್ಲಿ ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿ ಈ ಎವೈ 4.2 ರೂಪಾಂತರಿ ಭೀತಿ ಆರಂಭವಾಗಿದೆ. ಅಪಾರ ಸಾವು ನೋವುಗಳಿಗೆ ಕಾರಣವಾಗಿದ್ದ ಡೆಲ್ಟಾ ರೂಪಾಂತರಿಯ ಎರಡನೇ ಅಲೆ, ಇದೀಗ AY 4.2 ತಳಿಯು ಮೂರನೇ ಅಲೆಗೆ ಕಾರಣವಾಗಬಹುದೇ ಎನ್ನುವ ಆತಂಕ ಎದುರಾಗಿದೆ.

- Advertisement -

ಆರೋಗ್ಯ ಇಲಾಖೆ ಮೂಲಗಳು ನೀಡಿರುವ ಮಾಹಿತಿಯನ್ವಯ ರಾಜ್ಯದಲ್ಲಿಯೂ ಎರಡು AY 4.2 ತಳಿ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ ಈ AY 4.2 ತಳಿ ಸೋಂಕು ಪ್ರಕರಣಗಳು ಆಂಧ್ರಪ್ರದೇಶದಲ್ಲಿ 7, ಕೇರಳದಲ್ಲಿ 4, ಕರ್ನಾಟಕ ಮತ್ತು ತೆಲಂಗಾಣದಲ್ಲಿ ತಲಾ 2, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 1 ಪತ್ತೆಯಾಗಿವೆ ಎನ್ನಲಾಗಿದೆ. ಆ ಮೂಲಕ ದೇಶದಲ್ಲಿ ಈ AY 4.2 ತಳಿ ಸೋಂಕು ಪ್ರಕರಣಗಳ ಸಂಖ್ಯೆ ಒಟ್ಟು 17ಕ್ಕೆ ಏರಿಕೆಯಾಗಿದೆ.

ಡೆಲ್ಟಾಗಿಂತ ಹೆಚ್ಚಿನ ವೇಗದಲ್ಲಿ ಹರಡುತ್ತವೆಯೇ AY 4.2 ತಳಿ ?

- Advertisement -

ಭಾರತದಲ್ಲಿ ಪತ್ತೆಯಾಗಿರುವ ಕೋವಿಡ್ ವೈರಸ್ ರೂಪಾಂತರಿ ಎವೈ4.2 ಸಂಭಾವ್ಯವಾಗಿ ಸ್ವಲ್ಪ ಹೆಚ್ಚು ಸಾಂಕ್ರಾಮಿಕವಾಗಿರುವ ತಳಿಯಾಗಿದ್ದು ಕಾರಣ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚಿನ ವೇಗದಲ್ಲಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಹೇಳಲಾಗಿದೆ. ಆದರೆ ಡೆಲ್ಟಾ ರೂಪಾಂತರಕ್ಕಿಂತ ಗಣನೀಯವಾಗಿ ಹೆಚ್ಚು ವೇಗವಾಗಿ ಹರಡುತ್ತದೆ ಎಂಬುದಕ್ಕೆ ಸ್ಪಷ್ಟ ಸೂಚನೆ ಇಲ್ಲ. ಈ ಬಗ್ಗೆ ಅಧ್ಯಯನಗಳು ನಡೆಯುತ್ತಿವೆ ಎನ್ನಲಾಗಿದೆ.

ಡೆಲ್ಟಾ ರೂಪಾಂತರಿಯಷ್ಟು ಅಪಾಯಕಾರಿಯೇ ಹೊಸ ರೂಪಾಂತರಿ ?

ದೇಶದಲ್ಲಿ ಹಿಂದೆ ಪತ್ತೆಯಾಗಿದ್ದ ಆಲ್ಫಾ ರೂಪಾಂತರಿಗಳು ಭಾರತ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ತಮ್ಮ ಅಪಾರ ಸಾವು ನೋವುಗಳಿಗೆ ಕಾರಣವಾಗಿತ್ತು. ಡೆಲ್ಟಾ ರೂಪಾಂತರ ಭಾರತದಲ್ಲಿ 2ನೇ ಅಲೆಗೆ ಕಾರಣವೆಂದು ತಜ್ಞರ ವರದಿ ಹೇಳಿತ್ತು. ಅದೇ ರೀತಿ ಹೊಸ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಲಿದೆಯೇ ಎಂಬ ಆತಂಕ ಹೆಚ್ಚಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತಜ್ಞರು ಈ ಹಿಂದೆ ಪತ್ತೆಯಾಗಿದ್ದ ಆಲ್ಫಾ ಮತ್ತು ಡೆಲ್ಟಾ ರೂಪಾಂತರಗಳಷ್ಟು ಈ ಎವೈ 4.2 ಅಪಾಯಕಾರಿಯಲ್ಲ ಎಂದು ಹೇಳಿದ್ದಾರೆ. AY.4.2 ಡೆಲ್ಟಾ ಉಪ ಪರಂಪರೆಯು ಹೆಚ್ಚುತ್ತಿರುವ ಪಥದಲ್ಲಿ ಉತ್ಪತ್ತಿಯಾಗುವ ಎಲ್ಲಾ ಅನುಕ್ರಮಗಳಲ್ಲಿ ಸರಿಸುಮಾರು ಶೇ 6 ರಷ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. ಇದು ಆಲ್ಫಾ ಮತ್ತು ಡೆಲ್ಟಾ ರೂಪಾಂತರಗಳಂತಹ ದೊಡ್ಡ ರೀತಿಯಲ್ಲಿ ಹೊರಹೊಮ್ಮುವ ಸಾಧ್ಯತೆಯಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.



Join Whatsapp