Home ಟಾಪ್ ಸುದ್ದಿಗಳು ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್

ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್

ಬೆಂಗಳೂರು: ಜೆಡಿಎಸ್ ನಾಯಕ ಆಯನೂರು ಮಂಜುನಾಥ್, ಶಿಕಾರಿಪುರದ ನಾಗರಾಜ್ ಗೌಡ ಸೇರಿದಂತೆ ಹಲವು ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಗುರುವಾರ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

ಈ ವೇಳೆ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿದಂತೆ ಹಲವು ಉಪಸ್ಥಿತರಿದ್ದರು.


ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆಯನೂರು ಮಂಜುನಾಥ್, ಯಾವುದೇ ಷರತ್ತುಗಳು ಇಲ್ಲದೆಯೇ ಕಾಂಗ್ರೆಸ್​ ಪಕ್ಷ ಸೇರ್ಪಡೆ ಆಗಿದ್ದೇನೆ. ನಾನು ಹಿಂದೆ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಗಿದ್ದೆ. ಆದರೆ ಈಗ ಅಂತ ಯಾವ ಕಂಡಿಷನ್ ಕೂಡ ಹಾಕಿಲ್ಲ. ಬಹಳ ದೊಡ್ಡ ಸಂಖ್ಯೆಯ ನಾಯಕರು ಜೊತೆಗಿದ್ದಾರೆ. ಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ನನ್ನ ಎಲ್ಲ ಶ್ರಮ ಹಾಕುತ್ತೇನೆ. ಕೆಲವು ಜಿಲ್ಲಾ ನಾಯಕರು ಸಿಲ್ಲಿಯಾಗಿ ಮಾತಾಡಿರಬಹುದು. ಆ ಬಗ್ಗೆ ಜಿಲ್ಲಾಧ್ಯಕ್ಷರು ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೆಸರು ಉಲ್ಲೇಖಿಸಲದೇ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೇಶ್​ಗೆ ತಿರುಗೇಟು ನೀಡಿದರು.

Join Whatsapp
Exit mobile version