Home ಟಾಪ್ ಸುದ್ದಿಗಳು ನಾಳೆ ಆಯನೂರು ಮಂಜುನಾಥ್ ಕಾಂಗ್ರೆಸ್’ಗೆ ಸೇರ್ಪಡೆ

ನಾಳೆ ಆಯನೂರು ಮಂಜುನಾಥ್ ಕಾಂಗ್ರೆಸ್’ಗೆ ಸೇರ್ಪಡೆ

ಶಿವಮೊಗ್ಗ: ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾನು ಮತ್ತು ನನ್ನ ಸ್ನೇಹಿತರು ಪಕ್ಷ ಸೇರ್ಪಡೆಯಾಗಲಿದ್ದೇವೆ. ಶಿಕಾರಿಪುರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ನಾಗರಾಜಗೌಡ ಅವರು ನಮ್ಮೊಂದಿಗೆ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದರು.


ವಿಧಾನಸಭೆ ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಸೇರ್ಪಡೆಯ ಸಂದರ್ಭ ಎದುರಾಗಿತ್ತು. ಆಗ ಕಾರಣಾಂತರದಿಂದ ಜೆಡಿಎಸ್ ಸೇರಬೇಕಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದರು.
ಮುಂಬರುವ ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯ್ತಿ, ವಿಧಾನ ಪರಿಷತ್ ಚುನಾವಣೆಗೆ ನಾವೆಲ್ಲಾ ಶಕ್ತಿ ಮೀರಿ ಸಮಯ ವಿನಿಯೋಗ ಮಾಡುವ ನಿಲುವು ಹೊಂದಿದ್ದೇವೆ ಎಂದು ಹೇಳಿದರು.

Join Whatsapp
Exit mobile version