ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

Prasthutha|

ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯ ಮತ್ತು ಮಹಿಳೆಯ ನೇಮಕ

- Advertisement -

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.

ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರು ಮತ್ತು ಮಹಿಳೆಯರ ನೇಮಕ ಇದೇ ಮೊದಲಾಗಿದೆ.

- Advertisement -

ಇಂದು ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ ಈ ಅಧಿಸೂಚನೆ ಹೊರಡಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಬೈಲಾದ ಕಂಡಿಕೆ 5(1) ಮತ್ತು 5(5)ರಲ್ಲಿ ಪುದತ್ತವಾಗಿರುವ ಅಧಿಕಾರದನ್ವಯ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸದಸ್ಯರನ್ನಾಗಿ ಎಂ.ಎನ್ ಅಹೋಬಳಪತಿ, ಕೆ.ವೆಂಕಟೇಶ್ ಹಾಗೂ ಕೆ ನಿಂಗಜ್ಜ ಅವರನ್ನು ನೇಮಕ ಮಾಡಲಾಗಿದೆ.



Join Whatsapp