ಅಯೋಧ್ಯೆ, ಮಥುರಾ, ಕಾಶಿ ಸಮಸ್ಯೆಗಳು ಪರಿಹಾರವಾಗದೆ ಶಾಂತಿಯುತ ಬದುಕು ಅಸಾಧ್ಯ: ಉಮಾಭಾರತಿ

Prasthutha|

ಭೋಪಾಲ್: ಅಯೋಧ್ಯೆ, ಮಥುರಾ ಮತ್ತು ಕಾಶಿ ವಿಷಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸದೆ ನಾವು ಶಾಂತಿಯುತವಾಗಿ ಬದುಕಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಉಮಾಭಾರತಿ ತಿಳಿಸಿದ್ದಾರೆ.

- Advertisement -

ವಾರಣಾಸಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ, ಮಥುರಾ ಮತ್ತು ಕಾಶಿಯಂತಹ ಸ್ಥಳಗಳು ದೇಶಕ್ಕೆ ಏಕತೆಯನ್ನು ತರುತ್ತದೆ ಎಂದು ತಿಳಿಸಿದ್ದಾರೆ.

ಜ್ಞಾನವ್ಯಾಪಿ ಮಸೀದಿಯ ಆವರಣದಲ್ಲಿ ಆರಾಧನಾ ಹಕ್ಕುಗಳನ್ನು ಕೋರಿ ಹಿಂದುತ್ವ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯನ್ನುಪರಿಗಣಿಸಿರುವ ವಾರಣಾಸಿ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ ಉಮಾಭಾರತಿ, ಈ ವಿಚಾರವಾಗಿ ಎರಡೂ ಕಡೆಯವರು ಪರಸ್ಪರ ಅವಮಾನಿಸಬೇಡಿ ಎಂದು ಹೇಳಿದ್ದಾರೆ.

- Advertisement -

ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆ ಮಾಡಲು ಅವಕಾಶ ನೀಡುವಂತೆ ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಮೊಕದ್ದಮೆಯನ್ನು ಪ್ರಶ್ನಿಸಿ ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯ ಮನವಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದ ಬಳಿಕ ಬಿಜೆಪಿ ನಾಯಕಿ ಉಮಾಭಾರತಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.



Join Whatsapp