ರಾಜ್ಯಾದ್ಯಂತ ಇಂದು ಆಯುಧ ಪೂಜೆ ಸಂಭ್ರಮ

Prasthutha|

ಮಂಗಳೂರು: ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಇಂದು ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ.

- Advertisement -

ಕರಾವಳಿಯಾದ್ಯಂತ ನವರಾತ್ರಿ ಹಿನ್ನೆಲೆಯಲ್ಲಿ ಸೋಮವಾರ ಆಯುಧ ಪೂಜೆ ನಡೆಸಲಾಗಿದೆ.


ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ಸಹಿತ ವಿವಿಧ ಕಡೆಗಳಲ್ಲಿ ಹೂ, ಹಣ್ಣು ವ್ಯಾಪಾರ ಬಿರುಸುಗೊಂಡಿದೆ. ರವಿವಾರ ಬೆಳಗ್ಗೆಯಿಂದಲೇ ವ್ಯಾಪಾರಿಗಳು ಮಾರಾಟ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಗ್ರಾಹಕರು ಖರೀದಿ ಸಂಭ್ರಮದಲ್ಲಿದ್ದರು.