ಆಯುಷ್ಮಾನ್ ಹೆಸರಿನಲ್ಲಿ ಕನಿಷ್ಠ 100 ಹಾಸಿಗೆಗಳನ್ನು ಫಲಾನುಭವಿ ಗಳಿಗೆ ಮೀಸಲಿಡಲು ರಾಜ್ಯ ಆರೋಗ್ಯ ಇಲಾಖೆ ಆದೇಶ

Prasthutha|

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಫಾರಸ್ಸಿನ ಮೇರೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಹೆಸರಿನಲ್ಲಿ ಕನಿಷ್ಠ 100 ಹಾಸಿಗೆಗಳನ್ನು ಫಲಾನುಭವಿ ಗಳಿಗೆ ಮೀಸಲಿಡಲು ರಾಜ್ಯ ಆರೋಗ್ಯ ಇಲಾಖೆ ಆದೇಶ ನೀಡಿದೆ.

- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರು ಈ ಕುರಿತು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸುತ್ತೋಲೆ ಹೊರಡಿಸಿದ್ದಾರೆ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಕೆಎಂಸಿ ಆಸ್ಪತ್ರೆಯಲ್ಲಿ 2018ರಿಂದ ನೋಂದಣಿಯಾಗಿತ್ತು. ಆದರೆ, ಎಬಿಎಆರ್‌ಕೆ ಯೋಜನೆಯಡಿಯಲ್ಲಿ ಆಸ್ಪತ್ರೆಯಲ್ಲಿದಾಖಲಾಗುವ ರೋಗಿಗಳಿಗೆ ಸೂಕ್ತವಾಗಿ ಹಾಸಿಗೆಗಳು ಲಭ್ಯವಾಗದೇ ಇದ್ದುದರಿಂದ ಈ ಯೋಜನೆ ವಿಮುಖಗೊಂಡಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ಎಬಿಎಆರ್‌ಕೆ ಯೋಜನೆಯಡಿ ಶಿಫಾರಸ್ಸಾದ ರೋಗಿಗಳಿಗೆ 100 ಹಾಸಿಗೆಗಳನ್ನು ಮೀಸಲಿಟ್ಟು, ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ.

- Advertisement -

ಸರಕಾರದ ಆದೇಶವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.



Join Whatsapp