ಆಝಾನ್ ಕೂಗುವುದರಿಂದ ಜನರ ಮೂಲಭೂತ ಹಕ್ಕು ಮೊಟಕುಗೊಳ್ಳುವುದಿಲ್ಲ: ಹೈಕೋರ್ಟ್ ತೀರ್ಪು ಸ್ವಾಗತಿಸಿದ SDPI,

Prasthutha|

ಬೆಂಗಳೂರು: ಆಝಾನ್ ಕೂಗುವುದರಿಂದ ಜನರ ಮೂಲಭೂತ ಹಕ್ಕು ಮೊಟಕುಗೊಳ್ಳುವುದಿಲ್ಲ, ಸಂವಿಧಾನದ ಪರಿಚ್ಛೇದ 25(1)ರ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಿಸುವ, ಪ್ರದರ್ಶಿಸುವ ಮತ್ತು ಪ್ರಚಾರ ಮಾಡುವ ಹಕ್ಕು ಹೊಂದಿರುತ್ತಾನೆ ಎಂದು ಸಂವಿಧಾನಾತ್ಮಕ ಹಕ್ಕಿನ ಪರ  ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.

- Advertisement -

 ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್ ನಲ್ಲಿರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಆಲಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿತು. ಇತರ ಧರ್ಮಗಳ ಅನುಯಾಯಿಗಳ ಭಾವನೆಗಳಿಗೆ ಆಝಾನ್ ನಲ್ಲಿರುವ ವಿಚಾರಗಳು ನೋವುಂಟು ಮಾಡುವುದರಿಂದ ಅದನ್ನು ಧ್ವನಿವರ್ದಕಗಳ ಮೂಲಕ ಕೂಗುವುದನ್ನು ತಡೆಯಬೇಕು ಎಂದು ಮನವಿಯಲ್ಲಿ ಕೋರಲಾಗಿತ್ತು.

ಬೆಂಗಳೂರಿನ ಭೈರವೇಶ್ವರ ನಗರದ ನಿವಾಸಿ ಚಂದ್ರಶೇಖರ್ ಆರ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ಪೀಠವು ನಡೆಸಿ, ಅರ್ಜಿಯನ್ನು ವಜಾಗೊಳಿಸಿತ್ತು.

Join Whatsapp