ಬಹರೈನ್ ಇಂಡಿಯನ್ ಸೋಶಿಯಲ್ ಫೋರಂನಿಂದ ‘ಆಝಾದಿ ಕಾ ಅಮೃತ್ ಮಹೋತ್ಸವ್’

Prasthutha|

ಮನಾಮ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂಡಿಯನ್ ಸೋಶಿಯಲ್ ಫೋರಂ ಬಹರೈನ್ ಕರ್ನಾಟಕ ಘಟಕ ಆಯೋಜಿಸಿದ್ದ “ಫ್ರೀಡಂ ಫೆಸ್ಟ್” ಕುಟುಂಬ ಸಮ್ಮಿಲನ ಕಾರ್ಯಕ್ರಮವು ಸಲ್ಮಾಬಾದ್ ಅಲ್ ಹಿಲಾಲ್ ಆಸ್ಪತ್ರೆ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು.

- Advertisement -

 ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳ ಛದ್ಮವೇಷ, ಹಾಡು, ದಂಪತಿಗಳಿಗೆ ರಸಪ್ರಶ್ನೆ, ಬಲೂನ್ ಗೇಮ್ ಇನ್ನಿತರ ಹಲವು ಸಾಂಸ್ಕೃತಿಕ ಚಟುವಟಿಕೆಗಳು ನಡೆದವು. 

 ಕಾರ್ಯಕ್ರಮದಲ್ಲಿ ಇಂಡಿಯನ್ ಸೋಶಿಯಲ್ ಫೋರಂ ಕಳೆದ ಎರಡು ವರ್ಷಗಳಲ್ಲಿ ಮತ್ತು ವಿಶೇಷವಾಗಿ ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ನಡೆಸಿದ ಕಾರ್ಯ ಚಟುವಟಿಕೆಗಳನ್ನು ಕಿರು ದೃಶ್ಯಾವಳಿ ಮೂಲಕ ಫೋರಂನ ಕೇಂದ್ರ ಸಮಿತಿ ಜೊತೆ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ನೆರವೇರಿಸಿದರು.

- Advertisement -

ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇಂಡಿಯನ್ ಸೋಶಿಯಲ್ ಫೋರಂ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರಫೀಕ್ ಅಬ್ಬಾಸ್, ಬಹರೈನಿನಲ್ಲಿ ಜಾತಿ ಮತ ಭೇದ ಇಲ್ಲದೆ ಇಂಡಿಯನ್ ಸೋಶಿಯಲ್ ಫೋರಂ ನಡೆಸುತ್ತಿರುವಂತಹ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗ ಬೇಕೆಂದು ಕರೆ ನೀಡಿದರು.

  ಸಭೆಯ ಅಧ್ಯಕ್ಷತೆಯನ್ನು ಇಂಡಿಯನ್ ಸೋಶಿಯಲ್ ಫೋರಂನ ಕರ್ನಾಟಕ ರಾಜ್ಯಾಧ್ಯಕ್ಷ ಇರ್ಫಾನ್ ಅಬ್ದುಲ್ ರಹ್ ಮಾನ್ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಕನ್ನಡ ಸಂಘ ಬಹರೈನ್ ಅಧ್ಯಕ್ಷ  ಪ್ರದೀಪ್ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಸ್ವಾತಂತ್ರ್ಯದ ಶುಭಾಶಯ ಕೋರಿ, ಯಾವುದೇ ಸಾಮಾಜಿಕ ಸಾಂಸ್ಕೃತಿಕ ಕಾರ್ಯಚಟುವಟಿಕೆಯಲ್ಲಿ ಕನ್ನಡ ಸಂಘದ ಬೆಂಬಲಸೂಚಿಸಿದರು ಮತ್ತು ಇಂಡಿಯನ್ ಸೋಶಿಯಲ್ ಫೋರಂನ ಸೇವಾ ಕಾರ್ಯಗಳ ಶ್ಲಾಘಿಸಿ ಪ್ರಶಂಶೆ ವ್ಯಕ್ತಪಡಿಸಿದರು. ಸಾಮಾಜಿಕ ಕಾರ್ಯಕರ್ತರಾದ  ಅಮರನಾಥ ರೈಯವರು,  ಮುಹಮ್ಮದ್ ಹಫೀಜ್ ಉಳ್ಳಾಲ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇಂಡಿಯನ್ ಸೋಶಿಯಲ್ ಫೋರಂನ ಕರ್ನಾಟಕ ಘಟಕ ಕಾರ್ಯದರ್ಶಿ ಮುಹಮ್ಮದ್ ನಝೀಮ್ ಸ್ವಾಗತಿಸಿ, ಸಮಿತಿ ಸದಸ್ಯ ಮುಹಮ್ಮದ್ ಸಿರಾಜ್ ಕಣ್ಣಂಗಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ರಾಜ್ಯ ಸಮಿತಿ ಸದಸ್ಯ ಮುಹಮ್ಮದ್ ಆಸೀಫ್ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Join Whatsapp