ಸರ್ಕಾರಿ ಶಾಲಾ ಮಕ್ಕಳಿಗೆ 6 ದಿನ ʻಮೊಟ್ಟೆ ಭಾಗ್ಯʼ: ಅಜೀಂ ಪ್ರೇಮ್’ಜೀ ಫೌಂಡೇಶನ್ ನಿಂದ ಸಹಕಾರ

Prasthutha|

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆಯನ್ನು ಇನ್ನು ಮುಂದೆ ವಾರದಲ್ಲಿ 6 ದಿನ ಕೊಡುವ ಯೋಜನೆಗೆ ಇಂದು ಚಾಲನೆ ನೀಡಲಾಯಿತು.

- Advertisement -

ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ ಯೋಜನೆ ಅಡಿ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಯೋಗದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಫೌಂಡೇಶನ್ ಸಂಸ್ಥಾಪಕ ಅಜೀಂ ಪ್ರೇಮ್ ಜೀ ಚಾಲನೆ ನೀಡಿದರು.


ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್ ಜೀ ಫೌಂಡೇಶನ್ ನಡುವೆ MOU ಆಗಿದೆ. ಒಪ್ಪಂದದ ಪ್ರಕಾರ 1500 ಕೋಟಿ ರೂ. ಖರ್ಚು ಮಾಡಿ 3 ವರ್ಷಗಳ ಅವಧಿಗೆ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಈಗಾಗಲೇ ನಾವು ಎರಡು ದಿನ ಮೊಟ್ಟೆ ಕೊಡ್ತಿದ್ದೇವೆ. ಮೊದಲು ಒಂದು ದಿನ ಇತ್ತು ನಾವು ಎರಡು ದಿನ ಕೊಡ್ತಿದ್ದೇವೆ. ಈಗ ಪ್ರೇಮ್ ಜೀ ದೊಡ್ಡ ಮನಸ್ಸು ಮಾಡಿ ಉಳಿದ 4 ದಿನ ಮೊಟ್ಟೆ ನೀಡುತ್ತಿದ್ದಾರೆ. 55-56 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿದಿನ ಮೊಟ್ಟೆಯನ್ನ 3 ವರ್ಷ ಕೊಡಲಾಗುತ್ತದೆ. ಪ್ರೇಮ್ ಜೀ ಮತ್ತು ಕುಟುಂಬ ವರ್ಗದವರಿಗೆ ಸರ್ಕಾರದ ವತಿಯಿಂದ, ನನ್ನ ಪರವಾಗಿ ಧನ್ಯವಾದ ಹೇಳುತ್ತೇನೆ ಎಂದರು.

- Advertisement -



Join Whatsapp
Exit mobile version